ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆ ಪರಿಪೂರ್ಣವಲ್ಲ: ಸಿಜೆಐ ಚಂದ್ರಚೂಡ್

Update: 2022-11-26 06:31 GMT

ಹೊಸದಿಲ್ಲಿ: ಕೊಲಿಜಿಯಂ ಸೇರಿದಂತೆ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆ ಪರಿಪೂರ್ಣವಲ್ಲ. ಅಸ್ತಿತ್ವದಲ್ಲಿರುವ ವ್ಯವಸ್ಥೆಯೊಳಗೆ ಕೆಲಸ ಮಾಡುವುದು ಇದಕ್ಕೆ ಪರಿಹಾರವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ Chief Justice of India D Y Chandrachud ಶುಕ್ರವಾರ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ನ್ಯಾಯಾಧೀಶರು ಸಂವಿಧಾನವನ್ನು ಅನುಷ್ಠಾನಗೊಳಿಸುವ ನಿಷ್ಠಾವಂತ ಸೈನಿಕರು. 1949 ರಲ್ಲಿ ಸಂವಿಧಾನ ಸಭೆಯು ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ 2015 ರಿಂದ ನವೆಂಬರ್ 26 ಅನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತದೆ. ಮೊದಲು ಈ ದಿನವನ್ನು ಕಾನೂನು ದಿನವಾಗಿ ಆಚರಿಸಲಾಯಿತು ಎಂದರು.

ಕೊಲಿಜಿಯಂ ವಿಷಯದ ಬಗ್ಗೆ ಮಾತನಾಡಿದ ಸಿಜೆಐ "ಕೊಲಿಜಿಯಂ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ.  ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆ ಪರಿಪೂರ್ಣವಲ್ಲ. ಆದರೆ ನಾವು ಸಂವಿಧಾನದ ಅಸ್ತಿತ್ವದಲ್ಲಿರುವ ಚೌಕಟ್ಟಿನೊಳಗೆ ಕೆಲಸ ಮಾಡುತ್ತೇವೆ. ಇದನ್ನು ಅರ್ಥೈಸಿ ನಮಗೆ ನೀಡಲಾಗಿದೆ. ನಾನು ಸೇರಿದಂತೆ ಕೊಲಿಜಿಯಂನ ಎಲ್ಲಾ ನ್ಯಾಯಾಧೀಶರು ಸಂವಿಧಾನವನ್ನು ಅನುಷ್ಠಾನಗೊಳಿಸುವ ನಿಷ್ಠಾವಂತ ಸೈನಿಕರು. ನಾವು ಅಪೂರ್ಣತೆಗಳ ಬಗ್ಗೆ ಮಾತನಾಡುವಾಗ, ಅಸ್ತಿತ್ವದಲ್ಲಿರುವ ವ್ಯವಸ್ಥೆಯಲ್ಲಿ ನಮ್ಮ ರೀತಿಯಲ್ಲಿ ಕೆಲಸ ಮಾಡುವುದು ನಮಗೆ ಪರಿಹಾರವಾಗಿದೆ. ನ್ಯಾಯಾಂಗದಲ್ಲಿ ಉತ್ತಮ ವ್ಯಕ್ತಿಗಳನ್ನು ಪಡೆಯುವುದು ಹಾಗೂ  ಅವರಿಗೆ ಹೆಚ್ಚಿನ ಸಂಬಳ ನೀಡುವುದು ಕೊಲಿಜಿಯಂ ವ್ಯವಸ್ಥೆಯನ್ನು ಸುಧಾರಿಸುವುದಿಲ್ಲ’’ ಎಂದು ಅವರು ಹೇಳಿದರು.

Similar News