ಕುಂಬ್ರ: ಮಹಿಳೆಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ

Update: 2022-11-26 07:19 GMT

ಪುತ್ತೂರು, ನ.26: ಮಹಿಳೆಯೊಬ್ಬರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬ್ರದಲ್ಲಿ ನಡೆದಿರುವುದು ಶನಿವಾರ ಬೆಳಗ್ಗೆ ವರದಿಯಾಗಿದೆ.

ಮೃತರನ್ನು ಕುಂಬ್ರ ನಿವಾಸಿ ಇಬ್ರಾಹೀಂ ಎಂಬವರ ಪತ್ನಿ ನಬಿಸ(60) ಎಂದು ಗುರುತಿಸಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರೆನ್ನಲಾದ ನಬಿಸ ಶುಕ್ರವಾರ ರಾತ್ರಿ ಊಟ ಮುಗಿಸಿ ಮನೆಯ ಹೊರಗೆ ಮಲಗಿದ್ದರೆನ್ನಲಾಗಿದೆ. ಇಂದು ಬೆಳಗ್ಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಅವರ ಮೃತದೇಹ ಮನೆ ಪಕ್ಕದ ಗುಡ್ಡದಲ್ಲಿ ಪತ್ತೆಯಾಗಿದೆ. ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರಿಂದ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Similar News