ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ

Update: 2022-11-26 09:27 GMT

ಮಂಗಳೂರು, ನ.26: ನಗರದ ಬಲ್ಮಠ ಜಂಕ್ಷನ್ ಬಳಿಯ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಫೋರ್ಡ್ ಕಂಪೆನಿಯ ಕಾರು ಇದಾಗಿದ್ದು, ಕಾರಿನ ಇಂಜಿನ್ ಭಾಗ ಬಹುತೇಕ ಬೆಂಕಿಗಾಹುತಿಯಾಗಿದೆ. ನಿಲ್ಲಿಸಿದ್ದ ಕಾರಿನಲ್ಲಿ ಮಹಿಳೆಯರ ಸಹಿತ ಕೆಲವರು ಕುಳಿತಿದ್ದರು. ಮಧ್ಯಾಹ್ನ ಸುಮಾರು 1:15ರ ವೇಳೆಗೆ ಕಾರಿನ ಇಂಜಿನ್‌ನಲ್ಲಿ ದಟ್ಟವಾದ ಹೊಗೆ ಬರಲಾರಂಭಿಸಿತು ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಪರಿಸರವಿಡೀ ದಟ್ಟ ಹೊಗೆಯಿಂದ ಆವೃತವಾಗಿತ್ತು.

ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಟ್ರಾಫಿಕ್ ಎಸಿಪಿ ಗೀತಾ ಕುಲಕರ್ಣಿ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Similar News