ಉಡುಪಿ: ನಗರ ಕೇಂದ್ರ ಗ್ರಂಥಾಲಯದಲ್ಲಿ ಭಾರತ ಸಂವಿಧಾನ ದಿನಾಚರಣೆ

Update: 2022-11-26 13:23 GMT

ಉಡುಪಿ, ನ.26: ಅಜ್ಜರಕಾಡಿನಲ್ಲಿರುವ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಶನಿವಾರ   ಭಾರತ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. 

ಕಾರ್ಯಕ್ರಮವನ್ನು ಹಿರಿಯ ಕತೆಗಾರ್ತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಉದ್ಘಾಟಿಸಿದರು. ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಸಂವಿಧಾನವು  ೧೯೪೯ ನವೆಂಬರ್ ೨೬ರಂದು ಸಮರ್ಪಣೆಯಾಗಿದೆ ಎಂದವರು ನುಡಿದರು.

ಭಾರತ ಸಂವಿಧಾನದ ಬಗ್ಗೆ ಚರ್ಚಾಕೂಟದಲ್ಲಿ ಮಾತನಾಡಿದ  ಮಹಾಲಿಂಗ ಕಲ್ಕುಂದ, ಸಂವಿಧಾನ ರಚನೆ, ಅಂಗೀಕಾರ ಹಾಗೂ ಅದು ಒಳಗೊಂಡಿರುವ ಪ್ರಮುಖ ಅಂಶಗಳ ಕುರಿತು ಮಾಹಿತಿಗಳನ್ನು ಹಂಚಿಕೊಂಡರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ  ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.  ಪ್ರಥಮ ದರ್ಜೆ ಸಹಾಯಕರಾದ ಪ್ರೇಮ ಎಂ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.  

Similar News