ದೇರಳಕಟ್ಟೆ: ನರ್ಸಿಂಗ್ ವಿದ್ಯಾರ್ಥಿನಿಯ ಮೊಬೈಲ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು

Update: 2022-11-26 15:26 GMT

ಕೊಣಾಜೆ: ದೇರಳಕಟ್ಟೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿಯ ಮೊಬೈಲ್‌ ಅನ್ನು ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಕಿತ್ತುಕೊಂಡು ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ಕುನ್ಸಾಂಗ್ ಲಚಿಕ್  ಎಂಬ ನರ್ಸಿಂಗ್ ವಿದ್ಯಾರ್ಥಿನಿಯ ಕೈಯಲ್ಲಿದ್ದ ಮೊಬೈಲನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವಿದ್ಯಾರ್ಥಿನಿಯ ಕೈಯಲ್ಲಿದ್ದ ಮೊಬೈಲನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ವಿದ್ಯಾರ್ಥಿನಿ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Similar News