ಭಾರತದ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ

Update: 2022-11-27 10:37 GMT

ಹೊಸದಿಲ್ಲಿ: 2023ರ ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈಜಿಪ್ಟ್ (Egypt) ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ (Abdel Fattah al-Sisi) ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ರವಿವಾರ ತಿಳಿಸಿದೆ.

"ಇದೇ ಮೊದಲ ಬಾರಿಗೆ ಈಜಿಪ್ಟ್ ಅಧ್ಯಕ್ಷರು ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುತ್ತಾರೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ MEA ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್ ಅಧ್ಯಕ್ಷರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದ್ದರು. ಇದನ್ನು ಅಕ್ಟೋಬರ್ 16 ರಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಈಜಿಪ್ಟ್ ಅಧ್ಯಕ್ಷರಿಗೆ ಹಸ್ತಾಂತರಿಸಿದ್ದರು.

ಎರಡೂ ದೇಶಗಳು ಈ ವರ್ಷ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ.

1950 ರಲ್ಲಿ ಅಂದಿನ ಇಂಡೋನೇಷ್ಯಾ ಅಧ್ಯಕ್ಷ ಸುಕರ್ನೊ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದಾಗಿನಿಂದ ಭಾರತದ ಮಿತ್ರ ರಾಷ್ಟ್ರಗಳ ನಾಯಕರು ಗಣರಾಜ್ಯೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ.

2021 ರಲ್ಲಿ  ಆಗಿನ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಬ್ರಿಟನ್ನಲ್ಲಿ ಹೆಚ್ಚುತ್ತಿದ್ದ ಕೋವಿಡ್19 ಪ್ರಕರಣಗಳಿಂದಾಗಿ ಅವರ ಭೇಟಿಯನ್ನು ರದ್ದುಗೊಳಿಸಬೇಕಾಯಿತು.

Similar News