ವಿದ್ಯಾರ್ಥಿಗಳು ನಾಯಕತ್ವ, ವ್ಯಕ್ತಿತ್ವ ಮೈಗೂಡಿಸಿಕೊಳ್ಳಲಿ: ರಾಮದಾಸ್

Update: 2022-11-27 13:37 GMT

ಉಡುಪಿ: ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಮುಂದುವರಿ ಯಬೇಕು ಮತ್ತು ಪೋಷಕರು ವಿದ್ಯಾರ್ಥಿ ಗಳನ್ನು ಹುರಿದುಂಬಿಸಬೇಕು. ವಿದ್ಯಾರ್ಥಿಗಳು ನಾಯಕತ್ವ, ಉತ್ತಮ ನಡವಳಿಕೆ ಮತ್ತು ವ್ಯಕ್ತಿತ್ವವನ್ನು ಮೈಗೂಡಿಸಿ ಕೊಳ್ಳಬೇಕು ಎಂದು ಬೆಂಗಳೂರಿನ ಎಸಿಇ ಮ್ಯನುಪ್ಯಾಕ್ಚರಿಂಗ್ ಸಿಸ್ಟಮ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪಿ.ರಾಮದಾಸ್ ಹೇಳಿದ್ದಾರೆ.

ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರವಿವಾರ ನಡೆದ 2022-23ನೇ ಶೈಕ್ಷಣಿಕ ವರ್ಷದಲ್ಲಿ ಬಿ ಇ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣ ಜ್ಞಾನದ ಜೊತೆಗೆ ಸಾಮಾನ್ಯ ಜ್ಞಾನವನ್ನೂ ಹೊಂದಬೇಕು. ವಿದ್ಯಾರ್ಥಿ ಜೀವನ ದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಿಇಟಿ ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದಿರುವ ಮತ್ತು ಸೇತುಬಂಧ ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಆಡಳಿತ ಮಂಡಳಿಯ ಸದಸ್ಯ ಹರೀಶ್ ಬೆಳ್ಮಣ್, ಉಪಪ್ರಾಂಶು ಪಾಲ ಡಾ.ಗಣೇಶ್ ಐತಾಳ್, ಬಿಇ ಪ್ರಥಮ ವರ್ಷದ ಸಂಯೋಜಕ ಡಾ. ರವೀಂದ್ರ ಎಚ್.ಜೆ. ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲ ಪ್ರೊ.ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಪ್ರಾಧ್ಯಾಪಕಿ ಲಹರಿ ವೈದ್ಯ ಮತ್ತು ಸಚಿನ್ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಪೋಷಕರ ಸಭೆ ನಡೆಯಿತು.  

Similar News