×
Ad

ಆರೋಗ್ಯದಲ್ಲಿ ಏರುಪೇರು: ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

Update: 2022-11-27 19:21 IST

ಸುಳ್ಯ: ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರು ರವಿವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದ್ದು ಡೆಂಗ್ ಜ್ವರ ದೃಢಪಟ್ಟಿದೆ. ಎರಡು ದಿನ ಸಚಿವರು ಸಾರ್ವಜನಿಕ ಸಂಪರ್ಕಕ್ಕೆ ಲಭ್ಯರಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

Similar News