ಉಡುಪಿ ಜಿಲ್ಲಾ ಮಟ್ಟದ ಪ.ಪೂ.ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ

Update: 2022-11-28 13:35 GMT

ಉಡುಪಿ: ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ  ಕ್ರೀಡಾಕೂಟ ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಉದ್ಘಾಟನೆಗೊಂಡಿತು.

ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಡೆದಿರುವ ಈ ಕ್ರೀಡಾಕೂಟವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಬೆಲೂನುಗಳನ್ನು ಹಾರಿಬಿಡುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ ಶೆಟ್ಟಿ, ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಗಣಿತನಗರದ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾದ ಡಾ. ರೋಷನ್ ಶೆಟ್ಟಿ, ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Similar News