PFI ನಿಷೇಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಪೂರ್ಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2022-11-28 16:14 GMT

ಬೆಂಗಳೂರು, ನ.28: ಕೇಂದ್ರ ಗೃಹ ಸಚಿವಾಲಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಸಂಘಟನೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್  ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್‍ನ ನ್ಯಾಯಪೀಠ ತೀರ್ಪುನ್ನು ಕಾಯ್ದಿರಿಸಿರುವುದಾಗಿ ತಿಳಿಸಿದೆ.  

ಈ ಕುರಿತಾಗಿ ಪಿಎಫ್‍ಐ ರಾಜ್ಯ ಘಟಕ ಅಧ್ಯಕ್ಷ ನಾಸಿರ್ ಪಾಷಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ತೀರ್ಪುನ್ನು ಕಾಯ್ದಿರಿಸಿದೆ.

ಅರ್ಜಿದಾರರ ಪರ ವಾದಿಸಿದ ವಕೀಲ ಜಯಕುಮಾರ್ ಎಸ್. ಪಾಟೀಲ್, ಪಿಎಫ್‍ಐ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ, ಆದರೆ, ಪಿಎಫ್‍ಐ ಕಾನೂನು ಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣದ ನಿಷೇಧಕ್ಕೆ ಪ್ರತ್ಯೇಕ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಅದೇಶ ಹೊರಡಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸರಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪಿಎಫ್‍ಐ ಸಂಘಟನೆಯಿಂದ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಕಾರಣದಿಂದಲೇ ಪಿಎಫ್‍ಐ ಸಂಘಟನೆ ನಿರ್ಬಂಧಿಸಲಾಗಿದೆ ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ತೀರ್ಪುನ್ನು ಕಾಯ್ದಿರಿಸಿತು.

Similar News