ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೋರಿ ಅರ್ಜಿ: ಕೇಂದ್ರ, ರಾಜ್ಯಗಳಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂ

Update: 2022-11-28 16:20 GMT

ಹೊಸದಿಲ್ಲಿ, ನ. 27: ದೇಶದಾದ್ಯಂತದ ಸರಕಾರಿ ಶಾಲೆಗಳಲ್ಲಿ 6ರಿಂದ 12ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯರಿಗೆ ಉಚಿತ  ಸ್ಯಾನಿಟರಿ ಪ್ಯಾಡ್(Sanitary pad) ಒದಗಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ದಾವೆ ಕುರಿತು ಸುಪ್ರೀಂ ಕೋರ್ಟ್ (Supreme Court)ಸೋಮವಾರ ಕೇಂದ್ರ ಸರಕಾರ, ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರತಿಕ್ರಿಯೆ ಕೋರಿದೆ.

ಮಧ್ಯಪ್ರದೇಶ ಮೂಲದ ವೈದ್ಯೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಜಯಾ ಠಾಕೂರ್ (Jaya Thakur)ಅವರು ಸಲ್ಲಿಸಿದ ಮನವಿಯನ್ನು ಗಮನಕ್ಕೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ (D.Y. Chandrachud)ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ (P.S. Narasimha)ಅವರನ್ನು ಒಳಗೊಂಡ ಪೀಠ, ಕೇಂದ್ರ ಸರಕಾರ, ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸು ಜಾರಿ ಮಾಡಿತು.

ಸುಪ್ರೀಂ ಕೋರ್ಟ್ ಈ ಪ್ರಕರಣದ ಕುರಿತಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ನೆರವು ಕೋರಿತು. ಅರ್ಜಿದಾರರು ಸರಕಾರಿ ಹಾಗೂ ಸರಕಾರಿ ಅನುದಾನಿದ ಶಾಲೆಗಳ ವಿದ್ಯಾರ್ಥಿನಿಯರ ನೈರ್ಮಲ್ಯ ಹಾಗೂ ಸ್ವಚ್ಛತೆಯ ಪ್ರಮುಖ ವಿಷಯವನ್ನು ಎತ್ತಿದ್ದಾರೆ ಎಂದು ಹೇಳಿತು. 

Similar News