ಓಲಾ, ಉಬರ್ ಆಟೊ ಸೇವೆ | GST, ಶೇ.5 ಸೇವಾ ಶುಲ್ಕ ಸೇರಿಸಿ ಪ್ರಯಾಣ ದರ ನಿಗದಿ: ಹೈಕೋರ್ಟ್ ಗೆ ವಿವರಣೆ

Update: 2022-11-28 17:33 GMT

ಬೆಂಗಳೂರು, ನ.28: ಓಲಾ, ಉಬರ್ ಹಾಗೂ ರ್ಯಾಪಿಡೋ ಆಟೊರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಜಿಎಸ್‍ಟಿ ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಗೆ ನಿರ್ದೇಶಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‍ಗೆ ತಿಳಿಸಿದೆ.

ಆ್ಯಪ್ ಮೂಲಕ ಆಟೊರಿಕ್ಷಾ ಸೇವೆ ನೀಡುವಂತಿಲ್ಲ. ತಕ್ಷಣ ಈ ಸೇವೆ ಸ್ಥಗಿತಗೊಳಿಸಬೇಕೆಂದು ರಾಜ್ಯ ಸರಕಾರ ಇತ್ತೀಚೆಗೆ ನಿರ್ದೇಶಿಸಿರುವ ಆಕ್ಷೇಪಾರ್ಹ ಆದೇಶ ವಜಾ ಮಾಡುವಂತೆ ಕೋರಿ ಆ್ಯಪ್ ಆಧಾರಿತ ಆಟೊ ರಿಕ್ಷಾ ಸೇವೆ(ಅಗ್ರಿಗೇಟರ್) ಕಂಪೆನಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾ.ಎಸ್.ಜಿ.ಪಂಡಿತ ಅವರ ನೇತೃತ್ವದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.  

ರಾಜ್ಯ ಸರಕಾರದ ಪರ ವಕೀಲರು, ಸರಕಾರ ಹೊರಡಿಸಿರುವ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಡಿ.5ಕ್ಕೆ ಮುಂದೂಡಿತು.

   

Similar News