ಮತ್ತೊಬ್ಬ ರೌಡಿ ಫೈಟರ್ ರವಿ ಸೇರ್ಪಡೆ, ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್: ಕಾಂಗ್ರೆಸ್

Update: 2022-11-29 07:18 GMT

ಬೆಂಗಳೂರು: ಬಿಜೆಪಿ ನಾಯಕರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ರೌಡಿ ಶೀಟರ್ ಭಾಗಿಯಾಗಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿತ್ತಿದೆ.

ಈ ನಡುವೆ ಮತ್ತೊಬ್ಬ ರೌಡಿ ಫೈಟರ್ ರವಿ ಬಿಜೆಪಿ ಸೇರ್ಪಡೆಗೊಂಡಿದ್ದು, ವಿರೋಧ ಪಕ್ಷ  ಕಾಂಗ್ರೆಸ್ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  ''ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ BJP Karnataka ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ'' ಎಂದು ಕಿಡಿಕಾರಿದೆ. 

''ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು! ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜಪಿ ಪಕ್ಷ ತವರು ಮನೆ ಇದ್ದಂತೆ'' ಎಂದು ಕಾಂಗ್ರೆಸ್  ಟ್ವೀಟ್ ಮಾಡಿದೆ.

Similar News