ಸಿದ್ದರಾಮಯ್ಯ ವಿರುದ್ಧ ಹೇಳಿಕೆ: ಸಿ.ಟಿ.ರವಿ ವಿರುದ್ಧ ದೂರು ನೀಡಿದ ಕಾಂಗ್ರೆಸ್

Update: 2022-11-29 07:38 GMT

ಬೆಂಗಳೂರು,ನ.29: ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಾನೂನು ಸುವ್ಯವಸ್ಥೆ ಹದಗೆಡಿಸುವಂತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಗರದ ಹೈಗ್ರೌಂಡ್ಸ್ ಠಾಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (KPCC) ದೂರು ಸಲ್ಲಿಕೆ ಮಾಡಿದೆ. 

'ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ರವರು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ನಾಯಕರ ವಿರುದ್ಧ ಸುಳ್ಳು ಹಾಗೂ ಪ್ರಚೋದನಕಾರಿ ಮತ್ತು ಕಾನೂನು ಸುವ್ಯವಸ್ಥೆ ಹದಗೆಡಿಸುವ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಭಾರತೀಯ ದಂಡ ಸಮಿತಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು' ಎಂದು ಕಾಂಗ್ರೆಸ್ ಒತ್ತಾಯಿಸಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ''ಸಿಟಿ ರವಿ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಿಂದುಗಳ ಕೊಲೆಯಾಗುತ್ತದೆ ಎಂಬುವ ಹೇಳಿಕೆ ನೀಡಿ ರಾಜ್ಯದಲ್ಲಿ ಶಾಂತಿ ಕದಡುವ, ಧರ್ಮ ಸಂಘರ್ಷ ಉಂಟುಮಾಡುವುದು ಕೋಮು ಭಾವನೆ ಕೆರಳಿಸುವುದು ಹಾಗೂ ಒಳಸಂಚು ರೂಪಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಅವರ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಈ ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರನ್ನು ವಿಚಾರಣೆಗೆ ಒಳಪಡಿಸಬೇಕು'' ಎಂದು ಒತ್ತಾಯಿಸಿದರು. 

Similar News