ಸಾಮೂಹಿಕ ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಿಲ್ಕಿಸ್ ಬಾನು

Update: 2022-11-30 08:08 GMT

ಹೊಸದಿಲ್ಲಿ: ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ತನ್ನ ಕುಟುಂಬ ಸದಸ್ಯರನ್ನು ಹತ್ಯೆಗೈದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು Bilkis Bano ಬುಧವಾರ ಸುಪ್ರೀಂಕೋರ್ಟ್‌  ಮೆಟ್ಟಲೇರಿದ್ದಾರೆ ಎಂದು NDTV ವರದಿ ಮಾಡಿದೆ.

2002ರಲ್ಲಿ ಗುಜರಾತ್‌ನಲ್ಲಿ ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನುಗೆ 21 ವರ್ಷವಾಗಿತ್ತು ಹಾಗೂ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಕೊಲೆಯಾದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಹೆಣ್ಣು ಮಗು ಕೂಡ ಸೇರಿದೆ.

ಗುಜರಾತ್ ಸರಕಾರವು ಶಿಕ್ಷೆಗೊಳಗಾದ 11 ಅಪರಾಧಿಗಳನ್ನು ಆಗಸ್ಟ್ 15 ರಂದು ಗೋಧ್ರಾ ಉಪ-ಜೈಲಿನಿಂದ ಬಿಡುಗಡೆ ಮಾಡಿತ್ತು.

Similar News