ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ

Update: 2022-11-30 14:20 GMT

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ ಬಳಿ ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನ ವಾಹನದ ಮೇಲೆ ಇಂದು ನಗರಸಭೆ ಆರೋಗ್ಯ ಶಾಖೆಯ ಅಧಿಕಾರಿಗಳು ದಾಳಿ ನಡೆಸಿ, 75 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿ ಕೊಂಡು 5,000 ರೂ.ದಂಡ ವಿಧಿಸಿದರು.

ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಸಾರ್ವಜನಿಕರು, ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News