ಬ್ರಹ್ಮಾವರ: ಬಸ್ ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

Update: 2022-11-30 17:01 GMT

ಬ್ರಹ್ಮಾವರ: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಆಕಾಶವಾಣಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

 ಮೃತರನ್ನು ಹಂದಾಡಿಯ ಇಂದು ಶೇಖರ್ ಎಂದು ಗುರುತಿಸಲಾಗಿದೆ  ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ ರಸ್ತೆ ದಾಟುತ್ತಿದ್ದ ಇಂದು ಶೇಖರ್ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಕಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Similar News