ಶಿವಮೊಗ್ಗ: ಟಿಪ್ಪರ್ ಢಿಕ್ಕಿ; ಬೈಕ್‌ ಸವಾರ ಮೃತ್ಯು

Update: 2022-11-30 18:14 GMT

ಶಿವಮೊಗ್ಗ: ಬೈಕ್ ಮತ್ತು ಟಿಪ್ಪರ್ ಲಾರಿ ನಡುವಿನ ಭೀಕರ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟಿರುವ ಘಟನೆ  ಹೊಸನಗರದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಎದುರು ಬುಧವಾರ ವರದಿಯಾಗಿದೆ.

ಮೃತ ನೈಕ್ ಸವಾರನನ್ನು ಅಣ್ಣಪ್ಪ ಎಂದು ಗುರುತಿಸಲಾಗಿದೆ. 

ಬುಧವಾರ (ನ.30 ರಂದು) ಮಗಳನ್ನು ಕಾಲೇಜಿಗೆ ಬಿಟ್ಟು ವಾಪಾಸ್‌ ಹೋಗುವ ವೇಳೆ ಹೊಸನಗರದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಬಳಿ ವೇಗವಾಗಿ ಬಂದ ಟಿಪ್ಪರ್‌ ಲಾರಿಯೊಂದು ಹಿಂಬದಿಯಿಂದ ಬೈಕ್‌ ಗೆ ಢಿಕ್ಕಿ ಹೊಡೆದು ಸವಾರನನ್ನು ಎಳೆದುಕೊಂಡೇ ಹೋಗಿದೆ ಎನ್ನಲಾಗಿದೆ. ಪರಿಣಾಮ ತಲೆಗೆ ಗಂಭೀರ ಗಾಯಗೊಂಡ ಸವಾರ ಅಣ್ಣಪ್ಪ ಅವರನ್ನು  ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅಣ್ಣಪ್ಪ ಸಾವನ್ನಪ್ಪಿದ್ದಾರೆ.

ಅಪಘಾತದ ದೃಶ್ಯ ಕಾಲೇಜಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News