ಬೆಳಗಾವಿ | ಕಾಲೇಜಿನ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿತ: ವೀಡಿಯೋ ವೈರಲ್

Update: 2022-12-01 06:19 GMT

ಬೆಳಗಾವಿ:  ಫೇರ್ವೆಲ್ ಕಾರ್ಯಕ್ರಮದಲ್ಲಿ ನಾಡಧ್ವಜ ಹಿಡಿದು ಕುಣಿಯುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಇನ್ನೊಂದು ಗುಂಪಿನ ವಿದ್ಯಾರ್ಥಿಗಳು ಥಳಿಸಿದ ಘಟನೆ ಇಲ್ಲಿನ ಪ್ರತಿಷ್ಠಿತ ಪದವಿಪೂರ್ವ ಕಾಲೇಜಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ವಿದ್ಯಾರ್ಥಿಗಳಿಗಾಗಿ ಬುಧವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತಕ್ಕೆ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ನಾಡಧ್ವಜ ಪ್ರದರ್ಶಿಸುತ್ತ ಕುಣಿಯುತ್ತಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇನ್ನೊಂದು ಗುಂಪಿನ ವಿದ್ಯಾರ್ಥಿಗಳು ಆತನಿಗೆ ಥಳಿಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳು ಎಲ್ಲರೂ ಅಪ್ರಾಪ್ತರು. ಇಬ್ಬರನ್ನೂ ಕರೆದು ತಾಕೀತು ಮಾಡಿದ್ದೇವೆ ಬೆಳಗಾವಿ ಕಾನೂನು ಸುವ್ಯವಸ್ಥೆ  ವಿಭಾಗದ ಡಿಸಿಪಿ ರವೀಂದ್ರ ಗಡಾದಿ ಮಾಹಿತಿ ನೀಡಿದ್ದಾರೆ.

Full View

Similar News