ವಕ್ಫ್‌ ಬೋರ್ಡ್‌ ಅಧ್ಯಕ್ಷರ ಹೇಳಿಕೆ ವೈಯಕ್ತಿಕ, ಈ ಬಗ್ಗೆ ಯಾವುದೇ ಪ್ರಸ್ತಾವ ಇಲ್ಲ: ಸಚಿವೆ ಶಶಿಕಲಾ ಜೊಲ್ಲೆ

ಮುಸ್ಲಿಮ್ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ವಿಚಾರ

Update: 2022-12-01 07:46 GMT

ಬೆಂಗಳೂರು:  ಮುಸ್ಲಿಮ್ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮುಸ್ಲಿಮ್ ಹೆಣ್ಣು ಮಕ್ಕಳಿಗಾಗಿಯೇ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವಗಳು ಇಲ್ಲ. ಕಾಲೇಜುಗಳ ಪ್ರಾರಂಭದ ಬಗ್ಗೆ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಈ ವಿಷಯದ ಕುರಿತು ನಾನು ಈಗಾಗಲೇ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಜೊತೆ ಮಾತನಾಡಿದ್ದು, ಇದರ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

Similar News