2ನೇ ಪೊಕ್ಸೊ ಪ್ರಕರಣ: ಮುರುಘಾ ಶರಣರ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

Update: 2022-12-01 14:39 GMT

ಚಿತ್ರದುರ್ಗ, ಡಿ. 01: ಪೊಕ್ಸೊ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಆರೋಪದಡಿ ಕಾರಾಗೃಹದಲ್ಲಿರುವ ಚಿತ್ರದುರ್ಗ ಮುರುಘಾ ಮಠದ  ಶಿವಮೂರ್ತಿ ಶರಣರ 2ನೇ ಪೊಕ್ಸೊ ಪ್ರಕರಣದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯವು ಗುರುವಾರ ವಜಾ ಮಾಡಿದೆ. 

ಡಾ.ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ವಜಾ ಮಾಡಿದ್ದಾರೆ. ಇದರೊಂದಿಗೆ ಎರಡನೇ ಪ್ರಕರಣದಲ್ಲೂ ಮುರುಘಾ ಶರಣರಿಗೆ ವಿಚಾರಣಾಧೀನ ನ್ಯಾಯಾಲಯವು ಜಾಮೀನು ತಿರಸ್ಕರಿಸಿದಂತಾಗಿದೆ.

ಎರಡನೇ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಯರ ತಾಯಿ ಒಡನಾಡಿ ಸಂಸ್ಥೆ ಮೂಲಕ ದೂರು ನವೆಂಬರ್‌ 14 ರಂದು ಮೈಸೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಮುರುಘಾಶ್ರೀ ವಿರುದ್ಧ ಪ್ರಕರಣವ ದಾಖಲಿಸಲಾಗಿತ್ತು. 

ಇದನ್ನೂ ಓದಿ: 2ನೇ ಪೊಕ್ಸೊ ಪ್ರಕರಣ: ಮುರುಘಾಶ್ರೀ ವಿರುದ್ಧ ದೂರು ನೀಡಿದ್ದ ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿ ಬಂಧನ

Similar News