ವಿಪಕ್ಷ ನಾಯಕ ಸಿದ್ದರಾಮಯ್ಯ ಶಸ್ತ್ರ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು

Update: 2022-12-02 09:19 GMT

ಬೆಂಗಳೂರು, ಡಿ.2: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಸಣ್ಣ ಶಸ್ತ್ರ ಚಿಕಿತ್ಸೆಯೊಂದಕ್ಕಾಗಿ ನಗರದ ಹಳೇ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಶಸ್ತ್ರ ಚಿಕಿತ್ಸೆ ಬಳಿಕ ನಾಲ್ಕೈದು ದಿನಗಳ ಕಾಲ ವೈದ್ಯರು ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಕಾರ್ಯದರ್ಶಿ ತಿಳಿಸಿದ್ದಾರೆ. 

ಇದನ್ನೂ ಓದಿ: ಭ್ರಷ್ಟ ಅಧಿಕಾರಿಗೆ ಉನ್ನತ ಹುದ್ದೆ: ನಿರಾಣಿ ಶಿಫಾರಸ್ಸಿಗೆ ಕಾಂಗ್ರೆಸ್ ಆಕ್ಷೇಪ 

Similar News