ಶೃಂಗೇರಿ: ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ, ಸಾಮೂಹಿಕ ರಾಜೀನಾಮೆಗೆ ಮುಂದಾದ ಮೂರೂ ಪಕ್ಷಗಳ ಕಾರ್ಯಕರ್ತರು

ರಸ್ತೆ ದುರಸ್ತಿಗೊಳಿಸುವಂತೆ ಒತ್ತಾಯ

Update: 2022-12-02 09:50 GMT

ಚಿಕ್ಕಮಗಳೂರು. ಡಿ.2: ಗ್ರಾಮದ ರಸ್ತೆ ದುರಸ್ತಿ ಮಾಡದ ಸರ್ಕಾರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿರುವ ಘಟನೆ ವರದಿಯಾಗಿದೆ. 

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರ ಗ್ರಾಮಸ್ಥರು ಸಂಪೂರ್ಣ ಕುಸಿಯುವ ಹಂತ ತಲುಪಿರುವ 450ಕ್ಕೂ ಅಧಿಕ ಜನ ಓಡಾಡುವ ರಸ್ತೆ‌ ದುರಸ್ತಿಗೊಳಿಸದ ಸರ್ಕಾರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. 

'ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತಗೊಂಡಿರುವ ಹಾಡುಗಾರ ಗ್ರಾಮದಲ್ಲಿ ಸುಮಾರು 93 ಮನೆಗಳಲ್ಲಿ 450ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು, ಬಹುತೇಕರು ಎಸ್. ಸಿ, ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಗ್ರಾಮವನ್ನು ಸಂಪರ್ಕಿಸುವ ರಸ್ತೆ‌ ಸಂಪೂರ್ಣ ಕುಸಿಯುವ ಹಂತ ತಲುಪಿದ್ದರೂ ದುರಸ್ತಿಗೊಳಿಸದೇ ನಿರ್ಲಕ್ಷ್ಯ ವಹಿಸಲಾಗಿದೆ' ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ರಸ್ತೆ‌ ದುರಸ್ತಿಗೊಳಿಸದಿದ್ದಲ್ಲಿ ಪಕ್ಷದ ಎಲ್ಲಾ ಜವಾಬ್ದಾರಿಗಳಗೆ ರಾಜೀನಾಮೆ ನೀಡುವುದಾಗಿ ಗ್ರಾಮದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್  ಕಾರ್ಯಕರ್ತರು ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆನ್ನಲಾಗಿದೆ. 

Similar News