×
Ad

ಕಟಪಾಡಿ ಜಂಕ್ಷನ್‌ನಲ್ಲಿ ಅಪಘಾತ: ಬೈಕ್ ಸಹಸವಾರ ಯುವಕ ಮೃತ್ಯು

Update: 2022-12-02 15:16 IST

ಕಾಪು, ಡಿ.2: ಲಾರಿ ಮತ್ತು ಬೈಕ್ ಮಧ್ಯೆ ಇಂದು ಬೆಳಗ್ಗೆ ಕಟಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸಹಸವಾರ ಮೃತಪಟ್ಟಿರುವುದು ವರದಿಯಾಗಿದೆ.

ಮೃತರನ್ನು ಉದ್ಯಾವರ ಬೊಳ್ಜೆಯ ಸುಶಿಕ್ಷಿತ್(20) ಎಂದು ಗುರುತಿಸಲಾಗಿದೆ. ಅಪಘಾತದಿಂದ ಗಾಯಗೊಂಡಿರುವ ಬೈಕ್ ಸವಾರ ಜಯದೀಪ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಉದ್ಯಾವರದಿಂದ ಪಡುಬಿದ್ರೆ ಕಡೆ ಕ್ಯಾಟರಿಂಗ್ ಕೆಲಸಕ್ಕಾಗಿ ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಶಿಕ್ಷಿತ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರೀಶೀಲನೆ ನಡೆಸಿದ್ದಾರೆ.

Similar News