ವಿದ್ಯಾರ್ಥಿವೇತನ ರದ್ಧತಿ ಅಲ್ಪಸಂಖ್ಯಾತ ವಿರೋಧಿ ನೀತಿ: ಎಂ.ಪಿ.ಮೊಯಿದಿನಬ್ಬ

Update: 2022-12-02 13:13 GMT

ಉಡುಪಿ: ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್‌ನ ಮೆಟ್ರಿಕ್ ಪೂರ್ವ 1 ರಿಂದ 8ನೇ ತರಗತಿಯ ಅಲ್ಪ ಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ರದ್ದುಗೊಳಿಸುವ ಕೇಂದ್ರ ಸರಕಾರದ ನಿರ್ಧಾರವು ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ನೀತಿಯಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ.ಮೊಯಿದಿನಬ್ಬ ಆರೋಪಿಸಿದ್ದಾರೆ.

ದೇಶದಾದ್ಯಂತ ಗ್ರಾಮೀಣ ಭಾಗದಲ್ಲಿರುವ ವಿದ್ಯಾರ್ಥಿಗಳ ಕಡ್ಡಾಯ ದಾಖಲಾತಿ ಮತ್ತು ಹಾಜರಾತಿಯನ್ನು ಉತ್ತಮ ಪಡಿಸಲು ಈ ವಿಧ್ಯಾರ್ಥಿ ವೇತನ ಸಹಕಾರಿಯಾಗಿತ್ತು. ಆದರೆ ಕೇಂದ್ರ ಸರಕಾರ ಪೂರ್ವಾಪರ ಯೋಚಿ ಸದೆ ಹಠಾತ್ತಾಗಿ ರದ್ದುಗೊಳಿಸುವ ನಿರ್ಧಾರ ಮಾಡಿರುವುದು ಗ್ರಾಮೀಣ ಪ್ರದೇಶಗಳ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾಡಿದ ಅನ್ಯಾಯವಾಗಿದ್ದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಕೂಡಲೇ ಇದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ಅವರು ಪ್ರಕಟಣೆ ಯಲ್ಲಿ ಒತ್ತಾಯಿಸಿದ್ದಾರೆ.

Similar News