ಮನೆಗೆ ನುಗ್ಗಿ ನಗನಗದು ಕಳವು

Update: 2022-12-02 15:32 GMT

ಬ್ರಹ್ಮಾವರ, ಡಿ.2: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊಕ್ಕರ್ಣೆ ಕೂರಾಡಿ ಎಂಬಲ್ಲಿ ಡಿ.1ರಂದು ರಾತ್ರಿ ವೇಳೆ ನಡೆದಿದೆ.

ಮಣಿಪಾಲ ಆಸ್ಪತ್ರೆಯ ನರ್ಸ್ ಸಂಧ್ಯಾ ಎಂಬವರು ರಾತ್ರಿ ಪಾಳಿಯ ಕೆಲಸಕ್ಕೆ ಹೋಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಎದುರಿನ ಬಾಗಿಲಿನ ಚಿಲಕದ ಕೊಂಡಿ ಮುರಿದು ಒಳನುಗ್ಗಿದ ಕಳ್ಳರು ಕಾಪಾಟಿನಲ್ಲಿದ್ದ 20,000ರೂ. ನಗದು, ಹವಳದ ಸರ, 2 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆಂದು ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ 1,40,000ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News