ಉಡುಪಿ: ಡಿ.14ರಂದು ಉದ್ಯೋಗ ಮೇಳ

Update: 2022-12-02 16:40 GMT

ಉಡುಪಿ, ಡಿ.2: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮ ಡಿಸೆಂಬರ್ 14 ರಂದು ಬೆಳಗ್ಗೆ 9.30ಕ್ಕೆ ನಗರದ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿ ಸಲಿದ್ದು, ಎಸೆಸೆಲ್ಸಿ, ಪಿಯುಸಿ, ಪದವಿ, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಪದವಿ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಂ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574204, 9449943882, 9739691294, 9886805765 ಹಾಗೂ 9845463771 ಅಥವಾ -https://udupi.nic.in-ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾ ಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News