ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ʼಟಿ-565 ಟ್ಯಾಂಕ್ʼ ಕೊಡುಗೆ

Update: 2022-12-02 17:45 GMT

ಬೆಳ್ತಂಗಡಿ: ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ  ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಿದೆ.

ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಈ ಟ್ಯಾಂಕ್  ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಇದು ಬಳಕೆಯಾಗಿದೆ.

ತಾಂತ್ರಿಕ ಮಾಹಿತಿ: 40 ಟನ್‌ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗರಿಷ್ಠ ವೇಗ: ಗಂಟೆಗೆ 51 ಕಿ.ಮೀ. ಸಾಮರ್ಥ್ಯ: 500 ಅಶ್ವಶಕ್ತಿ.

ಸೋವಿಯತ್ ಒಕ್ಕೂಟದಲ್ಲಿ ನಿರ್ಮಾಣಗೊಂಡಿದ್ದ ಈ ಟ್ಯಾಂಕ್ ಅನ್ನು 1968ರಲ್ಲಿ ಭಾರತೀಯ ಸೇನೆಗೆ ಸೇರಿಸಲಾಯಿತು.

Similar News