ತಮಿಳುನಾಡಿನಾದ್ಯಂತ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿಷೇಧಿಸಿದ ಮದ್ರಾಸ್ ಹೈಕೋರ್ಟ್

Update: 2022-12-03 04:21 GMT

ಚೆನ್ನೈ: ತಮಿಳುನಾಡಿನಾದ್ಯಂತ ಇರುವ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ.

ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಹಾಗೂ   ಪಾವಿತ್ರ್ಯತೆಯನ್ನು ಕಾಪಾಡುವುದು ಎಂದು ನ್ಯಾಯಾಲಯ ಹೇಳಿದೆ.

ಜನರಿಗೆ ತೊಂದರೆಯಾಗದಂತೆ ದೇವಸ್ಥಾನಗಳಲ್ಲಿ ಫೋನ್ ಇಡಲು  ಲಾಕರ್‌ಗಳನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಈ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಲಾಗುವುದು.

ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ.

 ಮೊಬೈಲ್ ಫೋನ್‌ಗಳು ಜನರ ಗಮನವನ್ನು ಬೇರೆಡೆ ಸೆಳೆಯುತ್ತವೆ ಹಾಗೂ  ದೇವತೆಗಳ ಚಿತ್ರಗಳನ್ನು ಕ್ಲಿಕ್ಕಿಸುವುದು ಆಗಮ ನಿಯಮಗಳ ಉಲ್ಲಂಘನೆಯಾಗಿದೆ. ಫೋಟೊವು ದೇವಾಲಯಗಳ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

Similar News