ಚಿರತೆ ದಾಳಿ | ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂ. ಪರಿಹಾರ: ಬೊಮ್ಮಾಯಿ

ಚಿರತೆ ದಾಳಿ ತಡೆಯಲು ವಿಶೇಷ ತಂಡ ರಚನೆ

Update: 2022-12-03 06:59 GMT

ಬೆಂಗಳೂರು, ಡಿ.3:  ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರ ವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು.  ಮೊದಲು ಕಾಡುಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ವಿಶೇಷ ತಂಡ: ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾಡಿದಾರ್ ಸುತ್ತಮುತ್ತ  ಚಿರತೆಗಳೂ ಇವೆ.  ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ  ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.

Full View

Similar News