ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ, ಮೂವರು ಮೃತ್ಯು

Update: 2022-12-03 06:07 GMT

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರದಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.

ನಾರ್ಯಬೈಲ ಗ್ರಾಮದ ತೃಣಮೂಲ ಕಾಂಗ್ರೆಸ್‌ನ ಬೂತ್ ಅಧ್ಯಕ್ಷರ ಮನೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸ್ಫೋಟದಿಂದಾಗಿ ಮನೆಗೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೃಣಮೂಲ ನಾಯಕನ ಮನೆಯಲ್ಲಿ ದೇಶೀಯ ನಿರ್ಮಿತ ಬಾಂಬ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

Similar News