VIDEO- ಸಿ.ಟಿ ರವಿ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ BJP ಕಾರ್ಯಕರ್ತರಿಂದ ಹಲ್ಲೆ; ಆರೋಪ

Update: 2022-12-03 09:21 GMT

ಚಿಕ್ಕಮಗಳೂರು, ಡಿ.3 : ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವುದು ವರದಿಯಾಗಿದೆ. 

ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಅವರ ಮನೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆನ್ನಲಾಗಿದ್ದು, ಈ ವೇಳೆ ಕಾಂಗ್ರೆಸ್ ನ ನಾಲ್ವರು ಕಾರ್ಯಕರ್ತರಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಪ್ರತಿಭಟನಾಕಾರರನ್ನ ರಸ್ತೆ ಮಧ್ಯೆಯೇ ತಡೆದ ಪೊಲೀಸರು, ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಇದನ್ನೂ ಓದಿ: ರೌಡಿ ಲಿಸ್ಟ್ ನಲ್ಲಿ ಇದ್ದವರೆಲ್ಲ ರೌಡಿ ಎಂದು ಹೇಳಲಾಗದು, ನನ್ನ ಹೆಸರೂ ಇತ್ತು..: ಸಿ.ಟಿ.ರವಿ

Full View

Similar News