ಡಿ.9ರಿಂದ ಮಂಗಳೂರು-ಮುಂಬೈ ಮಧ್ಯೆ ವಿಶೇಷ ರೈಲು ಸಂಚಾರ

Update: 2022-12-03 15:14 GMT

ಉಡುಪಿ, ಡಿ.3: ಚಳಿಗಾಲದಲ್ಲಿ ಪ್ರಯಾಣಿಕರ ವಿಶೇಷ ಬೇಡಿಕೆಯ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆಯ ಸಹಯೋಗ ದೊಂದಿಗೆ ಮುಂಬೈಯ ಲೋಕಮಾನ್ಯ ತಿಲಕ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ಸಂಚಾರವನ್ನು ಕೊಂಕಣ ರೈಲ್ವೆ ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ರೈಲು ನಂ.01453 ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಡಿ.9ರಿಂದ ಪ್ರಾರಂಭಿಸಿ ಮುಂದಿನ ಜ.6ರವರೆಗೆ ಪ್ರತಿ ಶುಕ್ರವಾರ ರಾತ್ರಿ 10:15ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣದಿಂದ ಹೊರಡಲಿದ್ದು ಮರುದಿನ ಸಂಜೆ 5:05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ರೈಲು ನಂ.01454 ಮಂಗಳೂರು ಜಂಕ್ಷನ್- ಲೋಕಮಾನ್ಯ ತಿಲಕ್ ಸಾಪ್ತಾಹಿಕ ವಿಶೇಷ ರೈಲು ಡಿ.10ರಿಂದ ಪ್ರಾರಂಭಿಸಿ 2023ರ ಜನವರಿ 7ರವರೆಗೆ ಪ್ರತಿ ಶನಿವಾರ ಸಂಜೆ 6:45ಕ್ಕೆ ಮಂಗಳೂರು ಜಂಕ್ಷನ್‌ನಿಂದ ಪ್ರಯಾಣ ಬೆಳೆಸಲಿದ್ದು ಮರುದಿನ ಅಪರಾಹ್ನ 2:25ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.

ಈ ಸಾಪ್ತಾಹಿಕ ವಿಶೇಷ ರೈಲಿಗೆ ಥಾಣೆ, ಪನ್ವೇಲ್, ರೋಹಾ, ಖೇಡ್, ಚಿಪ್ಳುಣ್, ಸಂಗಮೇಶ್ವರ ರೋಡ್, ರತ್ನಗಿರಿ, ಕಂಕವಲ್ಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರೋಡ್, ತೀವಿಂ, ಕರ್ಮಾಲಿ, ಮಡಗಾಂವ್ ಜಂಕ್ಷನ್, ಕಾರವಾರ, ಗೋಕರ್ಣ ರೋಡ್, ಕುಮಟಾ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ ಬೈಂದೂರು, ಕುಂದಾಪುರ, ಉಡುಪಿ, ಮುಲ್ಕಿ, ಸುರತ್ಕಲ್ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. ಈ ರೈಲು ಒಟ್ಟು 17 ಬೋಗಿಗಳನ್ನು ಹೊಂದಿರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Similar News