ಪಿಎಸ್ಸೈ ನೇಮಕಾತಿ ಹಗರಣ | ಜಾಮೀನು ಕೋರಿ ದಿವ್ಯಾ ಹಾಗರಗಿ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2022-12-03 17:15 GMT

ಬೆಂಗಳೂರು, ಡಿ.3: ಪಿಎಸ್ಸೈ  ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರಕಾರಕ್ಕೆ ಕಲಬುರಗಿ ಹೈಕೋರ್ಟ್ (high court of karnataka) ನೋಟಿಸ್ ಜಾರಿ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಸೈ ಪರೀಕ್ಷೆ ವೇಳೆ ಕೆಲ ಅಭ್ಯರ್ಥಿಗಳ ಓಎಂಆರ್ ಶೀಟ್ ತಿದ್ದಿಸಿದ್ದಲ್ಲದೇ, ಇನ್ನು ಕೆಲ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ನೀಡಿ ಅಕ್ರಮ ಎಸಗಿರುವ ಆರೋಪ ದಿವ್ಯಾ ಮೇಲಿದೆ.

ಎಪ್ರಿಲ್ 29ರಂದು ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದರು. ದಿವ್ಯಾ ಹಾಗರಗಿ ಅವರು ಪ್ರಕರಣದಲ್ಲಿ 18ನೆ ಆರೋಪಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಕಲಬುರಗಿಯ ಚೌಕ್ಲೀ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್‍ಗಳಡಿ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ವಿವಿ | 2ನೇ ಸ್ನಾತಕೋತ್ತರ ಪದವಿಗೆ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರಾಕರಣೆ; ವ್ಯಾಪಕ ಆಕ್ಷೇಪ

Similar News