ಸಕಾಲಕ್ಕೆ ಚಿಕಿತ್ಸೆ ಸಿಗದೇ ಸಂಪ್‌ಗೆ ಬಿದ್ದಿದ್ದ ಮಗು ಮೃತಪಟ್ಟ ಪ್ರಕರಣ: ವೈದ್ಯ, ಆ್ಯಂಬುಲೆನ್ಸ್ ಚಾಲಕ ಅಮಾನತು

Update: 2022-12-03 18:29 GMT

ಮಧುಗಿರಿ (ತುಮಕೂರು), ಡಿ.3: ಸಕಾಲಕ್ಕೆ ಚಿಕಿತ್ಸೆ ಸಿಗದೇ ಸಂಪ್‌ಗೆ ಬಿದ್ದಿದ್ದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೇನಹಳ್ಳಿ ಆಸ್ಪತ್ರೆಯ ವೈದ್ಯ ಡಾ.ರೋಹಿತ್‌ ಮತ್ತು ಆ್ಯಂಬುಲೆನ್ಸ್ ಚಾಲಕನನ್ನು ಅಮಾನತು ಮಾಡಲಾಗಿದೆ.

ಡಿಸೆಂಬರ್ 2, ಶುಕ್ರವಾರದಂದು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು,ಆಡಳಿತ ವೈದ್ಯಧಿಕಾರಿ ಹಾಗೂ ಆಂಬ್ಯುಲೆನ್ಸ್ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಭ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಆಕಸ್ಮಿಕವಾಗಿ ನೀರಿನ ಸಂಪ್​ಗ ಬಿದ್ದು ಅಸ್ವಸ್ಥಗೊಂಡಿದ್ದ ಮಗು ಅಬ್ಬಾಸ್  ನನ್ನು ಕೂಡಲೇ ಪೋಷಕರು ಕೊಡಿಗೇನಹಳ್ಳಿ ಗ್ರಾಮ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆನ್ನಲಾಗಿದ್ದು,  ಆದರೆ, ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ ಎಂದು ಆರೋಪಿಸಲಾಗಿದೆ. ಹೀಗಾಗಿ ಬೇರೆ ಆಸ್ಪತ್ರೆಗ ಹೋಗಲು ಆ್ಯಂಬುಲೆನ್ಸ್‌ ಇದ್ದರೂ ಚಾಲಕನಿರಲಿಲ್ಲ. ಇದರಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ವರ್ಷದ ಮಗು ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆರೋಪ ಮಾಡಿದ್ದರು.  

Similar News