ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಚ್ಚ ಸುದೀಪ್ ಭೇಟಿ

Update: 2022-12-04 06:38 GMT

ಮುಲ್ಕಿ, ಡಿ.4: ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಕಿಚ್ಚ ಸುದೀಪ್ (Actor Kiccha Sudeep) ಇಂದು ಬೆಳಗ್ಗೆ ಭೇಟಿ ನೀಡಿದರು.

ಪತ್ನಿ ಪ್ರಿಯಾ ಜೊತೆ ಆಗಮಿಸಿದ ಸುದೀಪ್ ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಸುದೀಪ್ ದೇವಳಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಈ ವೇಳೆ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸಿತರಿದ್ದರು. ಖ್ಯಾತ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

Full View

Similar News