'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ: ಸಿಎಂ ಬೊಮ್ಮಾಯಿ‌

Update: 2022-12-04 07:01 GMT

ಹುಬ್ಬಳ್ಳಿ, ಡಿ.4: ರಾಜ್ಯದಲ್ಲಿ ಬಿಜೆಪಿಯ 'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.

ಚುನಾವಣೆ ಹತ್ತಿರ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಈ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಇದರ ಜೊತೆಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದರು.

ಜಾಯಿನ್ ಸಿಎಫ್ಐ ವಿಚಾರ: ಪೊಲೀಸರು ಕ್ರಮ

ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ 'ಜಾಯಿನ್ ಸಿಎಫ್ಐ' ಬರಹ ವಿಚಾರಕ್ಕೆ ಸಂಬಂಧಿಸಿ  ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

Similar News