ಇಂದೋರ್:‌ ಎಬಿವಿಪಿ‌ ಗಲಾಟೆಯ ಬಳಿಕ ಅಮಾನತ್ತಾದ ಕಾನೂನು ಕಾಲೇಜು ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್

Update: 2022-12-04 15:38 GMT

ಇಂದೋರ್: ಇಂದೋರ್‌ನ ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ, ಇನಾಮುಲ್ ರೆಹಮಾನ್ ಹಾಗೂ ಇತರೆ ಶಿಕ್ಷಕರ ವಿರುದ್ಧ ದ್ವೇಷವನ್ನು ಉತ್ತೇಜಿಸುವ ಮತ್ತು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

2019 ರಿಂದ ಕಾನೂನು ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ರೆಹಮಾನ್ ಅವರು ತಮ್ಮ ಕಚೇರಿಯ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ ಬಳಿಕ ಶನಿವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದರು. ಎಬಿವಿಪಿ ಕಾರ್ಯಕರ್ತರು ಡಿಸೆಂಬರ್ 1 ರಂದು "ಕಾಲೇಜಿನ ನಾಲ್ವರು ಮುಸ್ಲಿಂ ಶಿಕ್ಷಕರು ಧಾರ್ಮಿಕ ಮೂಲಭೂತವಾದಿ ಚಿಂತನೆಗಳನ್ನು ಪ್ರಚಾರ ಮಾಡುತ್ತಿದ್ದಾರೆ" ಎಂದು ಆರೋಪಿಸಿ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದರು.
 
ಈ ವಿಷಯದ ಕುರಿತು ಸಂಪೂರ್ಣ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ರಾಜ್ಯ ಗೃಹ ಸಚಿವರು ಆದೇಶಿಸಿದರು. ಬಳಿಕ ಭವರ್ಕುವಾ ಪೊಲೀಸರು ಈ ಸಂಪೂರ್ಣ ಪ್ರಕರಣದಲ್ಲಿ ಸುಮಾರು 4 ಜನರ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇಂದೋರ್‌ನ ಭವರ್ ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಕಾನೂನು ಕಾಲೇಜಿನಲ್ಲಿ 2 ದಿನಗಳ ಹಿಂದೆ ವಿವಾದ ಶುರುವಾಗಿದ್ದು, 2 ದಿನಗಳ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾಲೇಜಿನಲ್ಲಿ ಶಿಕ್ಷಕರ ವಿರುದ್ಧ ವಿವಿಧ ಆರೋಪಗಳನ್ನು ಮಾಡುವ ಮೂಲಕ ವಿವಾದ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ 5 ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಶುಕ್ರವಾರದಂದು ಕಾಲೇಜಿಗೆ ರಜೆ ತೆಗೆದುಕೊಂಡು ಅದೇ ತರಗತಿಯ ಕೊಠಡಿಯಲ್ಲಿ ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ತಪ್ಪು ಮಾಹಿತಿ ನೀಡುತ್ತಾರೆ ಎಂದು ಶಿಕ್ಷಕರ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಆರೋಪಿಸಿದ್ದರು.

Similar News