ಮಣಿಪಾಲ ಕೆಎಂಸಿಗೆ ದಿ ಎಕನಾಮಿಕ್ ಟೈಮ್ಸ್ ಪ್ರಶಸ್ತಿ

Update: 2022-12-04 16:23 GMT

ಮಣಿಪಾಲ, ಡಿ.4: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ’ದಿ ಎಕನಾಮಿಕ್ ಟೈಮ್ಸ್’ ನಿಂದ  ಮೂಳೆ ಮತ್ತು ಕೀಲಿನ  ವಿಭಾಗ (ದಕ್ಷಿಣ)ದಲ್ಲಿ ಅತ್ಯುತ್ತಮ  ಆಸ್ಪತ್ರೆ ಪ್ರಶಸ್ತಿಯನ್ನು ಗೆದ್ದುಕೊಂಡಿದೆ ಎಂದು ಕೆಎಂಸಿಯ ಪ್ರಕಟಣೆ ತಿಳಿಸಿದೆ.

ಮಣಿಪಾಲ ಮಾಹೆಯ ಪ್ರೊ ಚಾನ್ಸೆಲರ್ ಡಾ.ಎಚ್.ಎಸ್.ಬಲ್ಲಾಳ್  ಅವರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಮಾಹೆಯ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಆನಂದ್ ವೇಣು ಗೋಪಾಲ್ ಮತ್ತು ಮೂಳೆ ಮತ್ತು ಕೀಲಿನ ವಿಭಾಗದ ಮುಖ್ಯಸ್ಥ ಡಾ. ಶ್ಯಾಮಸುಂದರ್ ಭಟ್ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು.

ಮಾಹೆಯ ಮುಖ್ಯ  ಕಾರ್ಯ ನಿರ್ವಾಹಣಾಧಿಕಾರಿ ಸಿ.ಜಿ.ಮುತ್ತಣ್ಣ,  ಕೆಎಂಸಿ ಡೀನ್ ಡಾ ಶರತ್ ಕೆ ರಾವ್, ಆರ್ಥೋಪೆಡಿಕ್ಸ್ ವಿಭಾಗದ ಎಲ್ಲಾ ಘಟಕದ ಮುಖ್ಯಸ್ಥರು ಈ ವೇಳೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಚ್.ಎಸ್.ಬಲ್ಲಾಳ್,ಕೆಎಂಸಿ 1990 ರಿಂದ ಭಾರತದಾದ್ಯಂತ ಬಹಳ ಪ್ರಸಿದ್ಧವಾದ ಮೂಳೆ ಮತ್ತು ಕೀಲಿನ ವಿಭಾಗವನ್ನು ಹೊಂದಿದೆ. ವಿಭಾಗದ ಪ್ರತಿ ಘಟಕವು ಬೆನ್ನುಮೂಳೆ, ಭುಜ, ಮೊಣಕಾಲು, ಕೈ, ಮಕ್ಕಳ  ಮೂಳೆ  ಮತ್ತು ಕೀಲಿನ , ಕ್ರೀಡಾ ಗಾಯ, ಕಾಲು ಮತ್ತು ಪಾದದ ಚಿಕಿತ್ಸೆಯಲ್ಲಿ ಪರಿಣತಿಯನ್ನು ಹೊಂದಿದೆ ಎಂದರು.

ಡೀನ್ ಮತ್ತು ಮೂಳೆ ಶಸ್ತ್ರಚಿಕಿತ್ಸಕ ಡಾ ಶರತ್ ಕೆ ರಾವ್ ಮಾತನಾಡಿ, ಇದರಿಂದ ನಾವು ಹೆಚ್ಚು ಜವಾಬ್ದಾರರಾಗಿ ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡಲು ಪ್ರೇರೇಪಿಸುತ್ತದೆ ಎಂದರು.

Similar News