ಕೋಟ | ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2022-12-05 04:59 GMT

ಉಡುಪಿ, ಡಿ.5: ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರವಿವಾರ ರಾತ್ರಿ ವೇಳೆ ಕೋಟ ಸಾಲಿಗ್ರಾಮ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಬೆಳಗಾವಿಯ ಶಾಂತಪ್ಪ(40) ಎಂದು ಗುರುತಿಸಲಾಗಿದೆ. ಇವರು ಬೆಳಗಾವಿಯಿಂದ ಕುಂದಾಪುರ ಮಾರ್ಗವಾಗಿ ಅಜ್ಜರಕಾಡಿನಲ್ಲಿ ಕೆಲಸಕ್ಕೆಂದು ಬರುತ್ತಿದ್ದಾಗ ವಾಹನವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಾಂತಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

 ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ಗಂಗೊಳ್ಳಿy ಸ್ವಯಂಸೇವಕರಾದ ಇಬ್ರಾಹೀಂ ಗಂಗೊಳ್ಳಿ ಹಾಗೂ ನದೀಮ್ ಸಹಕರಿಸಿದರು.

ಅಪಘಾತದ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News