ಬಿ.ಸಿ.ರೋಡ್ | ತಲಪಾಡಿಯಲ್ಲಿ ಆಟೋ ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

Update: 2022-12-05 05:19 GMT

ಬಂಟ್ವಾಳ, ಡಿ.5: ಆಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ತಲಪಾಡಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳ ಸ್ಪಷ್ಟವಾದ ಮಾಹಿತಿ ಇನ್ನಷ್ಠೇ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಕೋಟ | ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Similar News