ಬೆಂಗಳೂರು: ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್: ಇಬ್ಬರು ಆರೋಪಿಗಳ ಬಂಧನ

Update: 2022-12-05 12:11 GMT

ಬೆಂಗಳೂರು, ಡಿ.5: ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 10.50 ಲಕ್ಷ ನಗದು, ಮೂರು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಹದೇವಪುರದ ಶ್ರೀನಿವಾಸ್ ಹಾಗೂ ಸುರೇಶ್ ಬಂಧಿತ ಆರೋಪಿಗಳಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬನ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.

ಆರೋಪಿಗಳು ನಿನ್ನೆ ಮಹದೇವಪುರದ ಬಳಿ ಮೊಬೈಲ್ ಆ್ಯಪ್ ಮೂಲಕ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದ ಸೋಲು ಗೆಲುವಿನ ಬಗ್ಗೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ ಎಂದರು. 
 

Similar News