ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Update: 2022-12-05 13:40 GMT

ಉಡುಪಿ, ಡಿ.5: ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಭಾಗಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ ರಕ್ಷಿತ್ ಆರ್. ಭಟ್ ಭಕ್ತಿಗೀತೆಯಲ್ಲಿ ಪ್ರಥಮ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ಪ್ರದೀಪ್ ಚಿತ್ರಕಲೆಯಲ್ಲಿ ಪ್ರಥಮ ಬಹುಮಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಮೈಸೂರು ವಿಭಾಗ ಮಟ್ಟದ ಈ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಾಸನದ ಹೆಚ್.ಕೆ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಹಾಸನದ ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ  ಆಯೋಜಿಸಲಾಗಿತ್ತು.

Similar News