ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Update: 2022-12-05 13:41 GMT

ಕುಂದಾಪುರ, ಡಿ.5: ಕುಂದಾಪುರದ ಆರ್‌ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಭರತನಾಟ್ಯ ಕಲಾವಿದಳಾದ ಪೂರ್ವಿಕಾಳ ಈ ಸಾಧನೆಯನ್ನು ಕಾಲೇಜಿನ ಸಂಚಾಲಕರಾದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಪ್ರಾಂಶುಪಾಲ ನವೀನ್ ಕುಮಾರ ಶೆಟ್ಟಿ ಅಭಿನಂದಿಸಿದ್ದಾರೆ.

Similar News