ಬೆಳಗ್ಗೆ 8.30ರ ನಂತರ ಶಾಲಾ ವಾಹನ ಸಂಚಾರ ನಿಷೇಧ…: ಬೆಂಗಳೂರು ಸಂಚಾರ ಆಯುಕ್ತ ಎಂ.ಎ.ಸಲೀಂ

Update: 2022-12-05 18:56 GMT

ಬೆಂಗಳೂರು, ಡಿ.5: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಶಾಲಾ ಕಾಲೇಜು ಬಸ್‍ಗಳ ಸಂಚಾರಕ್ಕೆ ಸಮಯ ನಿಗದಿಪಡಿಸಲು ಸಂಚಾರ ಪೊಲೀಸರು ಮುಂದಾಗಿದ್ದಾರೆ.

ಪ್ರತಿನಿತ್ಯ ಬೆಳಗ್ಗೆ 8.15ರ ನಂತರ ಶಾಲೆಗಳ ಸಮೀಪವೇ ವಿದ್ಯಾರ್ಥಿಗಳನ್ನು ಇಳಿಸಿ ಅಲ್ಲಿಯೇ ಸಂಜೆವರೆಗೂ ವಾಹನಗಳನ್ನು ನಿಲ್ಲಿಸಿರುತ್ತಾರೆ.ಇದರಿಂದ ವಾಹನ ದಟ್ಟಣೆ ಕಂಡುಬರುತ್ತಿದೆ.ಹೀಗಾಗಿ, ಸೂಕ್ತ ಸಮಯ ನಿಗದಿಪಡಿಸುವ ಜೊತೆಗೆ, ನಿರ್ಲಕ್ಷ್ಯವಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು, ವಾಹನ ದಟ್ಟಣೆ ಕುರಿತು ನಿತ್ಯ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆ ಸದ್ಯ ನಗರದ ರೆಸಿಡೆನ್ಸಿ ರಸ್ತೆಯಲ್ಲಿ ಈ ನಿಯಮ ಜಾರಿಗೆ ತರಲಾಗುತ್ತಿದೆ. ಬೆಳಗ್ಗೆ 8:30 ನಂತರ ಶಾಲಾ ಬಸ್‍ಗಳ ಸಂಚಾರವನ್ನು ನಿಷೇಧಿಸಲು ನಿರ್ಧರಿಸಿದ್ದು, ಈ ಸಂಬಂಧ ಶಾಲಾ ಆಡಳಿತ ಮಂಡಳಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Full View

Similar News