ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಗಟ್ಟಿ ಪಕ್ಷದಿಂದ ಅಮಾನತು: ಕಾಂಗ್ರೆಸ್
Update: 2022-12-05 21:47 IST
ಉಳ್ಳಾಲ: ಉಳ್ಳಾಲ ನಗರಸಭೆಯ ಸದಸ್ಯ ರವಿಚಂದ್ರ ಗಟ್ಟಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಾಂಗ್ರೆಸ್ ಅಮಾನತುಗೊಳಿಸಿದೆ.
ನಗರಸಭೆ ಸದಸ್ಯ ರವಿಚಂದ್ರ ಗಟ್ಟಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಪಾನಮತ್ತರಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮೈಮೇಲಿನ ಬಟ್ಟೆಗಳನ್ನು ಕಳಚಿ ಬಿದ್ದುಕೊಂಡಿದ್ದರು. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಅವರು ಉಳ್ಳಾಲ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಭೆಗೆ ಗೈರು ಹಾಜರಾಗಿದ್ದರು. ಆದ್ದರಿಂದ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನುತಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.