ಉಡುಪಿ ಮೂಲದ ವಿದ್ಯಾರ್ಥಿ ದುಬೈಯಲ್ಲಿ ನಿಧನ

Update: 2022-12-06 02:05 GMT

ದುಬೈ: ವಿದ್ಯಾಭ್ಯಾಸಕ್ಕಾಗಿ ದುಬೈಗೆ ತೆರಳಿದ್ದ ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾಗಿದ್ದಾರೆ.

ಕಾಪು ತಾಲೂಕಿನ ಅಹ್ಮದ್ ಬಿಲಾಲ್ (20) ನಿಧನರಾದ ವಿದ್ಯಾರ್ಥಿ. ಉಡುಪಿಯಲ್ಲಿ ಪಿಯುಸಿ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ದುಬೈಗೆ ತೆರಳಿದ್ದರು. ಅನಾರೋಗ್ಯಕ್ಕೀಡಾದ ಅವರನ್ನು  ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ, ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಇಂದು ನಿಧನರಾದರು ಎಂದು ತಿಳಿದುಬಂದಿದೆ.

"ಬಿಲಾಲ್ ತಂದೆ ಅಬ್ದುಸ್ಸಲಾಂ ಸೂರಿಂಜೆ ಅವರು 35 ವರ್ಷಗಳಿಂದ ದುಬೈಯಲ್ಲಿ ದುಡಿಯುತ್ತಿದ್ದ ಹಿನ್ನೆಲೆಯಲ್ಲಿ, ಬಿಲಾಲ್ ನಾಲ್ಕು ತಿಂಗಳ ಹಿಂದೆ ದುಬೈಗೆ ತೆರಳಿದ್ದರು. ಮೃತ ಬಿಲಾಲ್‌ ತಂದೆ, ತಾಯಿ, ಇಬ್ಬರು ಸಹೋದರಿಯರು, ಓರ್ವ ಸಹೋದರ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ ಎಂದು ಆಸಿಫ್ ಉಚ್ಚಿಲ ಮಾಹಿತಿ ನೀಡಿದ್ದಾರೆ.

Similar News