ಗಡಿ ವಿವಾದ: ಬೆಳಗಾವಿಯಲ್ಲಿ ಪ್ರತಿಭಟನೆ, ಮಹಾರಾಷ್ಟ್ರ ವಾಹನಗಳಿಗೆ ಮಸಿ, ಕಲ್ಲು ತೂರಾಟ

Update: 2022-12-06 09:33 GMT

ಬೆಳಗಾವಿ,(Belagavi) ಡಿ. 06: ಮತ್ತೆ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಭುಗಿಲೆದ್ದಿದೆ. ಮಂಗಳವಾರ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ, ಮಹಾರಾಷ್ಟ್ರ ಲಾರಿಗಳನ್ನ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದ ಪ್ರತಿಭಟನಾಕಾರರನ್ನು ಬೆಳಗಾವಿಯ ಹಿರೇಬಾಗೇವಾಡಿ ಟೋಲ್‌ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿ ನೂರಾರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಮಹಾರಾಷ್ಟ್ರ ನೋಂದಣಿ ಇರುವ ವಾಹನಗಳ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆನ್ನಲಾಗಿದ್ದು, ರಾಜ್ಯ ಸರ್ಕಾರ, ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಟ್ಟಿದ್ದಾರೆ.

Similar News