ಜಿ-20 ಶೃಂಗದ ಕುರಿತು ಕಾರ್ಯತಂತ್ರ ರೂಪಿಸಲು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ

Update: 2022-12-06 10:28 GMT

ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ಜಿ-20 ಶೃಂಗದ ಕುರಿತು ಕಾರ್ಯತಂತ್ರ ರೂಪಿಸಲು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಸರ್ವಪಕ್ಷಗಳ ಸಭೆ ನಡೆಯಿತು.

ರಾಜಕೀಯ ವೈರಿಗಳೆಲ್ಲರೂ ಒಂದೇ ವೇದಿಕೆಯಲ್ಲಿ ಒಟ್ಟಾಗಿದ್ದಲ್ಲದೆ, ಉಭಯ ಕುಶಲೋಪರಿ ವಿಚಾರಿಸಿಕೊಂಡರು.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠ ದೇವೇಗೌಡ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಎಡಪಕ್ಷಗಳ ನಾಯಕರಾದ ಡಿ.ರಾಜಾ ಹಾಗೂ ಸೀತಾರಾಮ ಯೆಚೂರಿ, ಬಿಜೆಡಿಯ ನವೀನ್ ಪಟ್ನಾಯಕ್, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು  ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಭೆಯಲ್ಲಿ ಜಿ-20 ಶೃಂಗಸಭೆಯ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ಅವಧಿಯಲ್ಲಿ ಪ್ರವಾಸೋದ್ಯ,ಮಕ್ಕೆ ಉತ್ತೇಜನ ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಭಾರತದ ಜಿ-20 ಶೃಂಗಸಭೆಯು ಇಡೀ ಜಗತ್ತಿಗೆ ದೇಶದ ಶಕ್ತಿಯನ್ನು ಪ್ರದರ್ಶಿಸಲು ಒಂದು ಅನನ್ಯ ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆಯಲ್ಲಿ ಹೇಳಿದರು.

ಪ್ರಧಾನಿ ಅವರು ಟೀಮ್‌ವರ್ಕ್‌ನ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು ಹಾಗೂ  ವಿವಿಧ G-20 ಕಾರ್ಯಕ್ರಮಗಳ ಸಂಘಟನೆಯಲ್ಲಿ ಎಲ್ಲಾ ನಾಯಕರ ಸಹಕಾರವನ್ನು ಕೋರಿದರು.

Similar News