ಕುತೂಹಲ ಮೂಡಿಸಿದ ಬಿಜೆಪಿ ಎಂಎಲ್ ಸಿ ಎಚ್. ವಿಶ್ವನಾಥ್- ಸಿದ್ದರಾಮಯ್ಯ ಭೇಟಿ

Update: 2022-12-06 09:47 GMT

ಬೆಂಗಳೂರು, ಡಿ.6:  ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ವಿಧಾನಸಭೆ ವಿಪಕ್ಷ ನಾಯಕ  ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. 

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಭೇಟಿಯಾದ ವಿಶ್ವನಾಥ್, ಕೆಲಕಾಲ ಮಾತುಕತೆ ನಡೆಸಿದ್ದಾರೆ. 

ಈ ಬಗ್ಗೆ ಸಿದ್ದರಾಮಯ್ಯ ಅವರು ವಿಡಿಯೋ ಸಹಿತ ಟ್ವೀಟ್ ಮಾಡಿದ್ದು,  'ಮಾಜಿ ಸಚಿವರಾದ ಎಚ್. ವಿಶ್ವನಾಥ್ ಅವರು ಇಂದು ನನ್ನನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು' ಎಂದು ಬರೆದುಕೊಂಡಿದ್ದಾರೆ. 

ಇತ್ತೀಚೆಗಷ್ಟೇ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ವಿಶ್ವನಾಥ್ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. 

ಇನ್ನು ಸಿದ್ದರಾಮಯ್ಯ ಅವರು ಇತ್ತೀಚಿಗೆ ಲಘು ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Similar News